ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆಯಾಗಿರುವ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ. ಅರಮನೆ ಮೈದಾನದಲ್ಲಿ “ಬೆಂಗಳೂರು ಕಂಬಳ ನಮ್ಮ ಕಂಬಳ” ಎಂಬ ಶೀರ್ಷಿಕೆಯಡಿ ನವೆಂಬರ್ 25 ಮತ್ತು 26ರಂದು ಕಂಬಳ ನಡೆಯಲಿದೆ.

ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ ನಡೆಯಲಿದೆ.
ಕಂಬಳ ವೀಕ್ಷಿಸಲು ಲಕ್ಷಾಂತರ ಮಂದಿ ಬರುವ ನಿರೀಕ್ಷೆ ಇದ್ದು, 145 ಮೀ ಉದ್ದದ ಕಂಬಳದ ಕರೆ ನಿರ್ಮಿಸಲಾಗುತ್ತಿದೆ.
ಈ ಹಿನ್ನೆಲೆ ನಾಳೆ (ಅ.11) ರಂದು ಬೆಳಿಗ್ಗೆ ಕರೆಪೂಜೆ ಕಾರ್ಯಕ್ರಮ ನಡೆಯಲಿದೆ.
ಅರಮನೆ ಮೈದಾನದಲ್ಲಿ ಕಂಬಳ ನಡೆಯುವ ಹಿನ್ನೆಲೆ ಅಲ್ಲಿಯೇ ಕರೆ ನಿರ್ಮಾಣ ಮಾಡಲಾಗುತ್ತಿದ್ದು, ನಾಳೆ ಕರೆಪೂಜೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಕಂಬಳ ಕಂಬಳದ ಇತರ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿವೆ.



























