ಪುತ್ತೂರು : ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ನಾಪತ್ತೆಯಾದ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು, ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಮಂದಿ ಜಮಾಯಿಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ..


























