ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ನಡೆಯಲಿರುವ 2 ನೇ ವರ್ಷದ ‘ಕುಡ್ಲದ ಪಿಲಿ ಪರ್ಬ’ದ ಚಪ್ಪರ ಮುಹೂರ್ತ ನಿನ್ನೆ ಮಂಗಳೂರಿನ ನೆಹರು ಮೈದಾನದಲ್ಲಿ ನೆರವೇರಿತು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಹುಲಿ ವೇಷ ಇಂದು ದೇಶ ವಿದೇಶಗಳಲ್ಲಿ ಜನಪ್ರಿಯತೆ ಗಳಿಸಿದ್ದು, ಈ ಕಲೆಗೆ ಇನ್ನಷ್ಟು ಮೆರುಗು ನೀಡಿ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ‘ಪಿಲಿ ಪರ್ಬ’ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ದ್ವಿತೀಯ ವರ್ಷದ ಪಿಲಿ ಪರ್ಬ ಅಕ್ಟೋಬರ್ 21 ರಂದು ನಡೆಯಲಿದ್ದು, ಈ ವರ್ಷದ ರ್ಸ್ಪರ್ಧೆಯಲ್ಲಿ 15 ತಂಡಗಳು ಭಾಗವಹಿಸಲಿವೆ ಎಂದರು.

ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಮ. ನ. ಪಾ. ಸದಸ್ಯರುಗಳಾದ ಶಕೀಲಾ ಖಾವ, ಜಯಲಕ್ಷ್ಮಿ, ಭರತ್ ಸೂಟರ್ ಪೇಟೆ, ಹಾಗೂ ನರೇಶ್ ಶೆಣೈ , ಉದಯ ಪೂಜಾರಿ, ಅಶ್ವಿತ್ ಕೊಟ್ಟಾರಿ, ಲಲಿತ್ ರಾಜ್ ಮೆಂಡನ್, ಕಮಲಾಕ್ಷ ಬಜಿಲ್ಕೇರಿ, ಮೋಹನ್ ಪೂಜಾರಿ, ಜಗದೀಶ್ ಕದ್ರಿ, ಚೇತನ್ ಕಾಮತ್, ಸೂರಜ್ ಕಾಮತ್, ಕಿರಣ್ ಶೆಣೈ, ಮುಂತಾದವರು ಉಪಸ್ಥಿತರಿದ್ದರು.


























