ಪುತ್ತೂರು : ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ವತಿಯಿಂದ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜರುಗುವ ಪಿಲಿಗೊಬ್ಬು-2023 ಕಾರ್ಯಕ್ರಮದ ಯಶಸ್ಸಿಗಾಗಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಸ್ .ಬಿ ಜಯರಾಮ ರೈ ಬಳಜ್ಜ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು, ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ಸ್ಥಾಪಕಾದ್ಯಕ್ಷರಾದ ಸಹಜ್ ರೈ ಬಳಜ್ಜ, ಕೆಯ್ಯೂರು ಗ್ರಾ.ಪಂ ಅಧ್ಯಕ್ಷರಾದ ಶರತ್ ಮಾಡಾವು, ಸಮಿತಿ ಪದಾಧಿಕಾರಿಗಳಾದ ದಿನೇಶ್ ವಾಸುಕಿ, ಮಧುಕುಮಾರ್, ಪುನೀತ್, ಹರ್ಷರಾಜ್ ಉಪಸ್ಥಿತರಿದ್ದರು.
























