ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಬಿಟ್ಟು ಉಳಿದ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿಷೇಧ ಇರುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.
ಪಟಾಕಿ ಸ್ಫೋಟ ಮಾಡುವ ಬಗ್ಗೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಹಸಿರು ಪಟಾಕಿ ಮಾತ್ರ ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನಿಷೇಧ ಮಾಡಲಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
ಅಲ್ಲದೇ ಪಟಾಕಿ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮ ನಡೆಸಲು ಸೂಚಿಸಲಾಗಿದೆ. ಸ್ಥಳೀಯ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿಗಳನ್ನು ಸ್ಫೋಟಿಸದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

























