ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಹಾರಿ ಬಿದ್ದಿರೋ ಘಟನೆ ಮಂಗಳೂರು ನಗರ ಹೊರವಲಯದ ಗುರುಪುರ ಬಳಿ ನಡೆದಿದೆ. ಈ ಘಟನೆಯು ಅಕ್ಟೋಬರ್ 15ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳದ ಕೈಕಂಬ ಜೋಡುಮಾರ್ಗ ನಿವಾಸಿಯಾಗಿದ್ದ ಚಾಲಕ ಮಹಮ್ಮದ್ ತನ್ನ ಕಾರನ್ನು ಅತೀ ವೇಗವಾಗಿ ಚಲಾಯಿಸಿದ್ದಕ್ಕೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತಕ್ಕಿಡಾಗಿದ್ದ ಕಾರು ಹೊಂಡಕ್ಕಿಳಿದರೂ ಚಾಲಕ ಹಾಗೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನೂ, ಅತೀ ವೇಗವಾಗಿ ಕಾರನ್ನು ಚಾಲನೆ ಮಾಡಿದ ತಪ್ಪಿಗೆ ಮಹಮ್ಮದ್ ಮೇಲೆ ಬಜ್ಪೆ ಪೊಲೀಸರು ಕೇಸ್ ದಾಖಲಿಸಿಕೊಂಡು ಮೂರು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.




























