ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ಗೆ ಟಿಪ್ಪರ್ ಡಿಕ್ಕಿಯಾದ ಘಟನೆ ಅರುಣಾ ಥಿಯೇಟರ್ ಬಳಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಗೆ ಟಿಪ್ಪರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಘಟನೆಯಲ್ಲಿ ಬಸ್ ನ ಹಿಂಭಾಗಕ್ಕೆ ಹಾನಿಯಾಗಿದೆ.
ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು, ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.


























