ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ, ಪುತ್ತೂರು ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ, ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ, ಸುಮಾರು 23 ಗೋಣಿ ಸುಲಿಯದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.26 ರಂದು ಕಲಂ:454, 457, 380 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ ರವರ ನೇತೃತ್ವದ ತನಿಖಾ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪುತ್ತೂರು ಬಡಗನ್ನೂರು ಗ್ರಾಮದ ಶ್ರವಣ್ ಕೆ, ಜಯಚಂದ್ರ, ನಿಡ್ಪಳ್ಳಿಯ ಅಶೋಕ, ಪುನೀತ್ ಬಂಧಿತರು.
ಬಂಧಿತರಿಂದ ಸುಮಾರು ರೂ 1,55,925/- ಮೌಲ್ಯದ ಅಡಿಕೆ ಹಾಗೂ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ.
ವಶಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ 4,15,925/- ಆಗಿರುತ್ತದೆ.

























