ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವ ದಿನವನ್ನು ಕನ್ನಡ ಮಾತೆಗೆ ವಂದಿಸುವುದರ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ ದ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕನ್ನಡ ಉಪನ್ಯಾಸಕಿ ಸಂಪಾವತಿ ಕೆ. ಮಾತನಾಡಿ ಕನ್ನಡದ ಮತ್ತು ಕರ್ನಾಟಕದ ಇತಿಹಾಸ, ಪರಂಪರೆ ಬಗ್ಗೆ ವಿವರಿಸಿದರು. ನಂತರ ವಿದ್ಯಾರ್ಥಿಗಳು ಕನ್ನಡ ಭಾಷೆ ಮತ್ತು ನಾಡಿನ ವೈಭವಗಳನ್ನು ಬಿಂಬಿಸುವ ಗೀತೆಗಳನ್ನು ಹಾಡಿದರು.
ಕಾಲೇಜಿನ ಉಪನ್ಯಾಸಕಿ ವಿಶ್ವಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


























