ಪುತ್ತೂರು : ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸರ್ವೆ ಸಮೀಪ ನಡೆದಿದೆ.
ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಮೃತ ಬಾಲಕ.

ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಸುಪ್ರೀತ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.
ಈತ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.


























