ಉಡುಪಿ : ಟ್ಯಾಂಕರ್ ಹರಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ನಡೆದಿದೆ.
ಪ್ರಜ್ವಲ್ ಮೃತ ದುರ್ದೈವಿ. ಮೃತ ಪ್ರಜ್ವಲ್ ದಕ್ಷಿಣ ಕನ್ನಡ ಜಿಲ್ಲೆಯ ಕಂಚಿನಡ್ಕ ಗ್ರಾಮದ ನಿವಾಸಿ.
ಖಾಸಗಿ ಬಸ್ವೊಂದು ಪ್ರಯಾಣಿಕರನ್ನು ಕೆಳಗಡೆ ಇಳಿಸುತ್ತಿದ್ದು,. ಇದೇ ವೇಳೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಜ್ವಲ್ ಮೇಲಿಂದ ಹಾರಿ ಬಿದ್ದಿದ್ದಾನೆ. ಈ ವೇಳೆ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























