ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿ ಇಂದು ನಿಧನ ಹೊಂದಿದರು.

ಅಂಗಡಿಮಾರು ಕೃಷ್ಣ ಭಟ್ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕೃಷ್ಣ ಭಟ್ ಅವರಿಗೆ 103 ವರ್ಷ ವಯಸ್ಸಾಗಿತ್ತು.
ಮೃತರು ಐವರು ಪುತ್ರರು ಮತ್ತು ಆರು ಮಂದಿ ಪುತ್ರಿಯರನ್ನು ಅಗಲಿದ್ದಾರೆ.
ಕೃಷ್ಣ ಭಟ್ ಅವರು ಹಿರಿಯ ವಿದ್ವಾಂಸರಾಗಿದ್ದು, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ ಆಗಿದ್ದರು.
ಕೃಷ್ಣ ಭಟ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.


























