ಪುತ್ತೂರು : ಬೈಕ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಫಿಲೋಮಿನಾ ಕಾಲೇಜಿನ ಬಳಿ ನಡೆದಿದೆ.

ಪಲ್ಸರ್ ಬೈಕ್ ಹಾಗೂ ಆಕ್ಟಿವಾ ನಡುವೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಸವಾರರಿಬ್ಬರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..
