ಉಡುಪಿ : ಅಪಾರ್ಟ್ಮೆಂಟ್ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಹೈಪಾಯಿಂಟ್ ಹೈಟ್ಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ(13) ಮೃತ ಬಾಲಕಿ.
ಪ್ರಜ್ಞಾ ಮುಂಜಾನೆ ಅಪಾರ್ಟ್ಮೆಂಟ್ನಿಂದ ಜಿಗಿದಿದ್ದು, ಬಳಿಕ ಗಾಯಗೊಂಡಿದ್ದ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಬಾಲಕಿ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.