ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಳಚ್ಚಿಲ್ ಸಮೀಪ ನಡೆದಿದೆ.

ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಿಂಬದಿಯಿಂದ ಡಿಕ್ಕಿಯಾಗಿದೆ.

ರಸ್ತೆಯಲ್ಲಿ ಹಾವೊಂದು ಹೋಗುತ್ತಿದ್ದೆಂದು ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಹಿಂಬದಿಯಲ್ಲಿದ್ದ ಬಸ್ ಕಾರಿಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಬಸ್ ಹಾಗೂ ಕಾರಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

























