ಪುತ್ತೂರು : ಶಾಸಕರ ಹಾಗೂ ನಗರಸಭಾ ಸೂಚನೆ ಪ್ರಕಾರ ಏಕ ದಿನದ ಮನೆ ಮನೆ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಪುತ್ತೂರು ನಗರ ಸಭೆ ವ್ಯಾಪ್ತಿಯ ಮನೆಗಳಿಗೆ ತೆರಳಿ ಕೊರೊನಾ ನಿಯಂತ್ರಣದ ಬಗ್ಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮ ಮೇ.16 ರಂದು ನಡೆಯಿತು.
ಏಕದಿನದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು,ನಗರ ಸಭಾ ಸದಸ್ಯರು ಹಾಗೂ ಆರೋಗ್ಯಾಧಿಕಾರಿಗಳು ನಗರ ಸಭಾ ಸಿಬ್ಬಂದಿಗಳು ನಗರ ಸಭೆ ವ್ಯಾಪ್ತಿಯ ಮನೆಗಳಿಗೆ ತೆರಳಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದರು.