ಪುತ್ತೂರು : ಅಪ್ರಾಪ್ತೆಯ ಮಾನಭಂಗ ಆರೋಪದಲ್ಲಿ ಪಾಣಾಜೆಯ 29 ವರ್ಷದ ಯುವಕನೋರ್ವನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ.
ನ.12 ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಕುರಿತು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಮತ್ತು ಇನ್ಸ್ಪೆಕ್ಟರ್ ಎಂ.ಎನ್. ರಾವ್ ಅವರ ಅವರ ಮಾರ್ಗದರ್ಶನದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಭವಾನಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕುಮಾರಸ್ವಾಮಿ, ಸುಚಿನ್ ಆರೋಪಿಯನ್ನು ಕೇರಳದ ಕೊಚ್ಚಿ ಸಮೀಪದ ಅಳುವ ರೈಲ್ವೇ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.

























