ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಹೊಸಮಠದಲ್ಲಿ ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿದ್ದು, ಈ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಯೊಂದನ್ನು ಬೇಟೆಯಾಡಿ ಹೊಸಮಠ ಸಮೀಪ ಮನೆಯೊಂದರಲ್ಲಿ ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ತಂಡ ದಾಳಿ ಮಾಡಿದೆ.
ಈ ವೇಳೆ ಆರೋಪಿತರು ಮಾಂಸ ಸಮೇತ ಹಿಡಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಮನೆ ಹಿಂಭಾಗದಲ್ಲಿ ಮಾಂಸ ಮಾಡಲು ಉಪಯೋಗಿಸಿದ ಬುಟ್ಟಿ, ಗೋಣಿ ಚೀಲಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.























