ಪುತ್ತೂರು : ನೆಹರುನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕ್ಕೆ ನೆಹರುನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಈಗಾಗಲೇ ಅನುದಾನ ಮಂಜೂರು ಮಾಡಲಾಗಿದ್ದು, ಈ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮವು ನಾಳೆ (ನ.16) ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಶಿಲನ್ಯಾಸ ಕಾರ್ಯಕ್ರಮ ನೆರವೇರಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಶಿಲನ್ಯಾಸ ನೆರವೇರಿಸಲಿದ್ದಾರೆ.
ಈಗಾಗಲೇ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.
ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

























