ಪುತ್ತೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ., ಪುತ್ತೂರು, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಮತ್ತು ಪುತ್ತೂರು ಹಾಗೂ ಕಡಬ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ-2023 ಆಚರಣೆ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನ.17 ರಂದು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರು ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ.
ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪದ್ಮನಾಭ ಬೋರ್ಕರ್ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಸಭಾಭವನವನ್ನು ಉದ್ಘಾಟಿಸಲಿದ್ದಾರೆ.
ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ರವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್.ಆರ್. ಹರೀಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಎಸ್.ಬಿ ಜಯರಾಮ ರೈ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರಾದ ನಾರಾಯಣ ಪ್ರಕಾಶ್ ಕೆ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ರಾಜಶೇಖರ ಜೈನ್, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾದ ಸಾವಿತ್ರಿ ರೈ, ಪುತ್ತೂರು ತಾಲೂಕು ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಪ್ರವೀಣ್ ರೈ ಮೇನಾಲ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷರಾದ ಕೃಷ್ಣಕುಮಾರ್ ರೈ, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೆಂಕಟ್ರಮಣ ಬೋರ್ಕರ್, ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೈಮುನತುಲ್ ಮೆಹ್ರಾ ಸಹಿತ ಹಲವು ಗಣ್ಯರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























