ಪುತ್ತೂರು : ಕಲ್ಲೇಗ ಮಾಡತ್ತಾರಿನಲ್ಲಿ ವರ್ಷಾವಧಿ ನೇಮೋತ್ಸವವು ಡಿ.25 ರಂದು ಜರುಗಲಿದ್ದು, ಆ ಪ್ರಯುಕ್ತ ಇಂದು ಶ್ರೀ ಪುಣ್ಯಕುಮಾರ ದೈವದ ಚಾವಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಶ್ರೀಧರ್ ಹೆಗ್ಡೆ, ಉಪಾಧ್ಯಕ್ಷರಾದ ಜಿನ್ನಪ್ಪ ಪೂಜಾರಿ ಮುರ, ವೇದವ್ಯಾಸ ರಾಮಕುಂಜ, ಕಾರ್ಯದರ್ಶಿ ನಾರಾಯಣ ಗೌಡ ಕಲ್ಲೇಗ, ಜೊತೆ ಕಾರ್ಯದರ್ಶಿ ಉಮೇಶ್ ಆಚಾರ್ಯ ಕಲ್ಲೇಗ ಮತ್ತು ಸಮಿತಿಯ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.






























