ವಿಟ್ಲ : ಮೈರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬಿ.ಪಿ., ಶುಗರ್ ತಪಾಸಣಾ ಕಾರ್ಯಕ್ರಮ ನಡೆಯಿತು.

ಮಕ್ಕಳ ಆಟೋಟ ಸ್ಪರ್ಧೆಗಳು ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ ವಹಿಸಿ, ಮಕ್ಕಳನ್ನು ಯಾವ ರೀತಿ ಬೆಳೆಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ತುಂಬಾ ಮಹತ್ವವಾದದ್ದು ಎಂದು ವಿವರಿಸಿದರು.

ಕಿರಿಯ ಆರೋಗ್ಯ ಕಾರ್ಯಕರ್ತೆ ಮಮತ ಮಕ್ಕಳ ಲಾಲನೆ ಪಾಲನೆ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಇಎಸ್ಒ ಲೀಮಾ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು.

ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿ, ಧನ್ಯವಾದ ನೀಡಿದರು.
ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಮಕ್ಕಳ ತಾಯಂದಿರು ಕಾರ್ಯಕ್ರಮದಲ್ಲಿ ಹಾಜರಿದ್ದರು.




























