ವಿಟ್ಲ : ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕರಿಗೆ ಸ್ಪೋಕನ್ ಇಂಗ್ಲೀಷ್ ಕಾರ್ಯಾಗಾರವನ್ನು ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ಉದ್ಘಾಟಿಸಿದರು.

ವಿಟ್ಲ ವಲಯದ ವಿಟ್ಲ, ಕಂಬಳಬೆಟ್ಟು, ಕನ್ಯಾನ, ಉದಯಗಿರಿ, ಮಿತ್ತನಡ್ಕ, ಅಜ್ಜಿನಡ್ಕ ಒಟ್ಟು 6 ಕ್ಲಸ್ಟರ್‌ನ ಸರಕಾರಿ ಶಾಲೆಯ 52 ಶಿಕ್ಷಕರಿಗೆ ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಉದಯ ಕುಮಾರ್ ಕೋಟ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ಎಂ.ಜೆ, ಸಮನ್ವಯಾಧಿಕಾರಿಗಳಾದ ರಾಘವೇಂದ್ರ ಬಲ್ಲಾಳ್, ವಿಟ್ಲ ಪಟ್ಟಣ ಪಂಚಾಯತ್ ಕೌನ್ಸಿಲರ್ ರಕ್ಷಿತಾ ಸನತ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುಮತಿ ದೇಜಪ್ಪ, ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಯತೀಶ್ ಪಾದೆ, ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಕನ್ಯಾನ, ಪುಷ್ಪ ಉದಯಗಿರಿ, ಬಿಂದು ವಿಟ್ಲ, ಜ್ಯೋತಿ ಕಂಬಳಬೆಟ್ಟು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಬಿ ವಿಶ್ವನಾಥ ಗೌಡ ಕುಳಾಲು ಸ್ವಾಗತಿಸಿದರು. ದೈಹಿಕ ಶಿಕ್ಷಕರಾದ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.


























