ಉಪ್ಪಿನಂಗಡಿ : ಪುತ್ತಿಲ ಪರಿವಾರ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಹಿಂದೂ ಸಮಾಜದ ಐಕ್ಯತೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬೃಹತ್ ಹಿಂದೂ ಸಂಗಮ ನ.26 ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ನ.26 ರಂದು ಮಧ್ಯಾಹ್ನ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ವೇದಮೂರ್ತಿ ಹರೀಶ ಉಪಾಧ್ಯಾಯ ರವರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದೆ.
ಸಂಜೆ 6 ಗಂಟೆಗೆ ಮಹಾಮಂಗಳಾರತಿ, ರಾತ್ರಿ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ 8 ಗಂಟೆಗೆ ಬಿ ರಂಗಯ್ಯ ಬಲ್ಲಾಳ್ ಕೆದಂಬಾಡಿ ಬೀಡು ಸಂಯೋಜನೆಯಲ್ಲಿ ಸುಸ್ವರ ಮೆಲೋಡೀಸ್ ಉಪ್ಪಿನಂಗಡಿ ಇವರಿಂದ ಭಕ್ತಿ-ಭಾವ-ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ 6.30ಕ್ಕೆ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೆರವೇರಿಸಲಿದ್ದಾರೆ.
ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಮಹೇಂದ್ರ ವರ್ಮ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಉಪನ್ಯಾಸಕ ಆದರ್ಶ ಗೋಖಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಉಪ್ಪಿನಂಗಡಿ ಪೂಜಾ ಸಮಿತಿ ಗೌರವಾಧ್ಯಕ್ಷರಾದ ಡಿ. ಚಂದ್ರಪ್ಪ ಮೂಲ್ಯ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ಉದ್ಯಮಿ ಡಿ. ಕಿರಣ್ ಚಂದ್ರ ‘ಪುಷ್ಪಗಿರಿ’, ಉದ್ಯಮಿ ನಟೇಶ್ ಪೂಜಾರಿ, 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷರಾದ ಸ್ವಪ್ನ ಜೀವನ್, ಕೋಡಿಂಬಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷರಾದ ಉಷಾ ಲಕ್ಷ್ಮಣ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.


























