ಉಪ್ಪಿನಂಗಡಿ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಉರುವಾಲು ನಿವಾಸಿ ಸುಶ್ರುತ ಕೃಷ್ಣ ಜೆ.ಕೆ., ಬೆಳ್ತಂಗಡಿ ನೆರಿಯ ನಿವಾಸಿ ಸೆಬಾಸ್ಟಿಯನ್, ಕೇರಳ ವನ್ನಪುರಂ ನಿವಾಸಿ ಅನಿಲ್ ತೋಮಸ್ ಬಂಧಿತರು.
ನ.27 ರಂದು ಪುತ್ತೂರು ತಾಲೂಕು ಉಪ್ಪಿನಂಗಡಿ ರಾ.ಹೆ 75ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ತಪಾಸಣೆಯ ನಿಮಿತ್ತ ವೆನ್ಯೂ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಿದ್ದು, ಸದರಿ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು ರೂ 45.000/- ಮೌಲ್ಯದ 22.4 ಮಿಲಿ ಗ್ರಾಂ ತೂಕದ ಎಂಡಿಎಂಎ ಎಂಬ ಮಾದಕ ವಸ್ತು ಪತ್ತೆಯಾಗಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಆರೋಪಿಗಳೊಂದಿಗೆ, ಸದರಿ ಮಾದಕವಸ್ತು, ಆರೋಪಿಗಳ ಬಳಿಯಿದ್ದ 03 ಮೊಬೈಲ್ ಪೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 162/2023 ಕಲಂ: U/s-8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ r/w 34 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.