ಕರ್ನಾಟಕ ಮಿಲ್ಕ್ ಫೆಡರೇಶನ್ (K.M.F) ಬೆಂಗಳೂರು ಕೇಂದ್ರ ಕಛೇರಿಗೆ ನಡೆಸಿದ ನೇಮಕಾತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಮೆರಿಟ್ ಅಂಕಗಳೊಂದಿಗೆ ಮೈಸೂರು ಜಿಲ್ಲೆಯ ವಿಜಯನಗರ ನಿವಾಸಿ ಶಿಲ್ಪಾ ಹೆಚ್.ಎಂ ರವರು ಆಯ್ಕೆ ಆಗಿದ್ದಾರೆ. ಈ ಮೂಲಕ ವಿದ್ಯಾಮಾತಾ ಅಕಾಡೆಮಿಯ ಸಾಧನೆಯ ಮುಕುಟಕ್ಕೆ ಇನ್ನೊಂದು ಗರಿ ಲಭಿಸಿದಂತಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ಸಹಕಾರ ಸಂಘಗಳ ಬಗ್ಗೆ ವಿದ್ಯಾಮಾತ ಅಕಾಡೆಮಿಯಲ್ಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು ರಾತ್ರಿ 8 ರಿಂದ 9 ಗಂಟೆವರೆಗಿನ ನಿತ್ಯ 1 ಗಂಟೆಗಳ ಆನ್ಲೈನ್ ತರಬೇತಿಯನ್ನು ಶಿಲ್ಪಾ ರವರಿಗೆ ನೀಡಲಾಗುತ್ತಿತ್ತು ಅತ್ಯಧಿಕ ಮೆರಿಟ್ ನೊಂದಿಗೆ ಗ್ರೇಡ್ 2 ಹುದ್ದೆಗೆ ಆಗಿರುತ್ತಾರೆ.
ಸಹಕಾರ ತತ್ವ, ಸಾಮಾನ್ಯ ಜ್ಞಾನ ಇತ್ಯಾದಿಗಳ ಬಗ್ಗೆ ವಿಶೇಷ ತರಬೇತಿಯನ್ನು ನೀಡುವುದರ ಮೂಲಕ ಸ್ಥಳೀಯ ಸಹಕಾರಿ ಬ್ಯಾಂಕ್, K.M.F ಇತ್ಯಾದಿ ಪರೀಕ್ಷೆಗಳನ್ನು ಪಾಸ್ ಮಾಡಲು ಉತ್ತೇಜಿಸಲಾಗುತ್ತಿದೆ. ಈ ಕಾರಣದಿಂದ ಕಳೆದ K.M.F ನ ಮಂಗಳೂರು ವಿಭಾಗಕ್ಕೂ 3 ಜನ ಅಭ್ಯರ್ಥಿಗಳು ಅತ್ಯಧಿಕ ಅಂಕಗಳೊಂದಿಗೆ ಆಯ್ಕೆಯಾಗಿದ್ದರು, ಇದೀಗ ಬೆಂಗಳೂರು ವಿಭಾಗಕ್ಕೆ ಆಯ್ಕೆ ಆಗಿರುವುದು ಸಂತೋಷಕೊಟ್ಟಿದೆ.
ಭಾಗ್ಯೇಶ್ ರೈ, ಆಡಳಿತ ನಿರ್ದೇಶಕರು, ವಿದ್ಯಾಮಾತ ಅಕಾಡೆಮಿ



























