ಪುತ್ತೂರು : ವಿದ್ಯಾರ್ಥಿಯೊಬ್ಬನ ವಿರುದ್ಧ ಪೋಷಕರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

ಮೇನಾಲ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೋರ್ವನ ವಿರುದ್ಧ ಮಕ್ಕಳ ಪೋಷಕರು ಒಂದಾಗಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ತನ್ನ ತುಂಟಾಟ, ಕೀಟಲೆ, ಪೋಕರಿತನದಿಂದ ಶಾಲೆಯಲ್ಲಿ ಕುಖ್ಯಾತಿ ಪಡೆದಿದ್ದ ಈ ವಿದ್ಯಾರ್ಥಿ ನಿಷೇಧಿತ ವಸ್ತುಗಳನ್ನು ಸೇವಿಸಿ ಶಾಲೆಗೆ ಬಂದು ಇತರ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ತೊಂದರೆ ಕೊಡುತ್ತಿರುವುದಾಗಿ ಆರೋಪಿಸಿರುವ ಇತರ ಮಕ್ಕಳ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಸ್ತುತ ಶಾಲೆಯಲ್ಲಿ 123 ವಿದ್ಯಾರ್ಥಿಗಳಿದ್ದು, ಎಲ್ಲಾ ವಿದ್ಯಾರ್ಥಿಗಳ ಹೆತ್ತವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿದ್ಯಾರ್ಥಿಯನ್ನು ಡಿಬಾರ್ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಯಿಂದ ಕರೆದೊಯ್ಯುವುದಾಗಿ ಹೇಳಿರುವ ಪ್ರತಿಭಟನಾ ನಿರತ ಪೋಷಕರು ಶಿಕ್ಷಣಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಿವಂತೆ ಆಗ್ರಹಿಸಿದ್ದಾರೆ.
ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.

























