ವಿಟ್ಲ : ಕೆ.ಎಸ್.ಆರ್.ಟಿ.ಸಿಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡ ಶಾಂತರಾಮ ವಿಟ್ಲ ಪುತ್ತೂರು ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾಂತರಾಮ ವಿಟ್ಲ ಅವರು ಜನಪರ ಕಾರ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡವರು. ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ಅಶಕ್ತರ ಬಾಳಿಗೆ ಬೆಳಕಾಗಿದ್ದರು.
ಮೃತರ ಅಂತ್ಯ ಸಂಸ್ಕಾರ ನಾಳೆ (ಡಿ.16) ಬೆಳಗ್ಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.


























