ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.24 ಮತ್ತು 25 ರಂದು ಜರುಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರ ವಿತರಣೆ ಡಿ.22 ರಂದು ಪುತ್ತೂರು ಪೇಟೆಯಲ್ಲಿ ಜರುಗಲಿದೆ.

ಡಿ.22 ಶುಕ್ರವಾರದಂದು ಸಂಜೆ 4.30ಕ್ಕೆ ದರ್ಬೆ ವೃತ್ತದಿಂದ ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಣೆ ಜರುಗಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಂಧುಗಳು ಆಮಂತ್ರಣ ಪತ್ರ ವಿತರಣೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.


























