ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಯ್ಕೆಯಾಗಿದ್ದಾರೆ.

ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾಜಿ ಸೈನಿಕ, ರಾಜಕೀಯ ಚಿಂತಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ನಿರ್ವಹಣಾ ತಜ್ಞರಾಗಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.


























