ಬೆಂಗಳೂರು : ವಿಧಾನಪರಿಷತ್ ಪ್ರತಿಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆಯಾದರೆ., ವಿಧಾನಸಭೆ ಉಪನಾಯಕನಾಗಿ ಅರವಿಂದ ಬೆಲ್ಲದ್ ಆಯ್ಕೆಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಪರಿಷತ್ ಹಾಗೂ ವಿಧಾನ ಸಭೆಗೆ ವಿವಿಧ ಜವಾಬ್ದಾರಿಗಳಿಗೆ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೂ ವಿಧಾನಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ಆಯ್ಕೆ ಆಗಿರಲಿಲ್ಲ. ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಆರ್. ಅಶೋಕ್ ಆಯ್ಕೆ ಮಾಡಲಾಯಿತು. ಆದರೆ ವಿಧಾನಪರಿಷತ್ ವಿಪಕ್ಷ ನಾಯಕನ ಆಯ್ಕೆ ಆಗಿರಲಿಲ್ಲ., ಇದೀಗ ಕೊನೆಗೂ ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ನಡೆದಿದೆ.


























