ಪುತ್ತೂರು : ಶ್ರೀ ಶಂಕರಾಚಾರ್ಯ, ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಮ್, ಶಿರಸಿ, ಭಗವದ್ಗೀತಾ ಅಭಿಯಾನ – ಕರ್ನಾಟಕ ಹಾಗೂ ಜನಕಲ್ಯಾಣ ಟ್ರಸ್ಟ್, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಭಗವದ್ಗೀತಾಭಿಯಾನ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವೈಷ್ಣವಿ ಪೈ ( ನಾಗೇಶ್ ಪೈ ಮತ್ತು ಶಿಕ್ಷಕಿ ಸಹನಾ ಪೈ ದಂಪತಿಗಳ ಪುತ್ರಿ) ಪ್ರಥಮ ಬಹುಮಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























