ಕಾಣಿಯೂರು : ಆಟೋ ಚಾಲಕರೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಣಿಯೂರಿನ ಎಲುವೆ ಎಂಬಲ್ಲಿ ನಡೆದಿದೆ.
ಕಾಣಿಯೂರು ಬೆದ್ರಾಜೆ ನಿವಾಸಿ ವಸಂತ (42) ಮೃತರು.

ವಸಂತ ರವರ ಆಟೋ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























