ಕಾಣಿಯೂರು : ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಕಾಣಿಯೂರು ಇದರ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.
ಅಧ್ಯಕ್ಷರಾಗಿ ಗಣೇಶ್ ಉದನಡ್ಕ ಹಾಗೂ ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ ಅವಿರೋಧವಾಗಿ ಆಯ್ಕೆಯಾದರು.

ಬಳಿಕ ನಡೆದ ಸಭೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕಡೆಂಜಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಸಭೆ ಮುಗಿದ ನಂತರ ಎಲ್ಲರು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

























