ಪಾಣಾಜೆ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ದ.ಕ.ಜಿ.ಪಂ.ಮಾ.ಹಿ.ಪ್ರಾ. ಶಾಲೆ ಪಾಣಾಜೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇದರ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ‘ಕಲಾ ಸಮ್ಮಿಲನ’ ಡಿ.30 ರಂದು ಸಂಜೆ 6ರಿಂದ ಪಾಣಾಜೆ ಶಾಲಾ ವಠಾರದಲ್ಲಿ ನಡೆಯಲಿದೆ.
ಡಿ.30 ರಂದು ಬೆಳಿಗ್ಗೆ ಶಾಲಾ ಧ್ವಜಾರೋಹಣ ತದನಂತರ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ.
ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ಸಮ್ಮಿಲನ ನಡೆಯಲಿದೆ.
ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕರಾದ ಅಶೋಕ್ ಕುಮಾರ್ ರೈ ಅವರು ದೀಪ ಪ್ರಜ್ವಲಿಸಲಿದ್ದಾರೆ.
ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೈಮುನ್ನತ್ತುಲ್ ಮೆಹ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪಾಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ ದೇವಸ್ಯ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.




























