ಚಿಕ್ಕಮಗಳೂರು : ಮೂಡಿಗೆರೆ ಬಿಇಓ ಕಚೇರಿಯಲ್ಲಿ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳ್ಳಂಬೆಳಗ್ಗೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನ ನಿಂಗನಾಯಕ ಎಂದು ಗುರುತಿಸಲಾಗಿದೆ.
ಇಂದು ಕಚೇರಿ ಅಗಮಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಲಭ್ಯವಾಗಿಲ್ಲ.
ಮೃತ ಲಿಂಗನಾಯಕ ಮೂಲತ ಕಡೂರು ತಾಲೂಕಿನವರಾಗಿದ್ದು, ಮೂಡಿಗೆರೆ ಪಟ್ಟಣದಲ್ಲಿರುವ ಬಿಇಓ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮೂಡಿಗೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























