ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ನಾನ್ ಸಿಆರ್ ಝೆಡ್ ಮರಳು ಗುತ್ತಿಗೆ ಹೊಂದಿರುವ ತಾಲೂಕುಗಳಿಗೆ ರಾಜ್ಯ ಸರ್ಕಾರದ ಗಣಿ ಇಲಾಖೆಯ ಡಿಎಮ್ ಎಫ್ ಅನುದಾನವನ್ನು ಜಾರಿಗೊಳಿಸುವ ಬಗ್ಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ದಿನೇಶ್ ಮೆದು ಅವರು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಸಂಸದರು ಗಣಿ ಇಲಾಖೆ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾದ ಮುರುಗೇಶ್ ನಿರಾಣಿ ಅವರ ಜೊತೆ ಮಾತನಾಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಉಪಸ್ಥಿತರಿದ್ದರು.