ಪುತ್ತೂರು : ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡದ ನಾಯಕತ್ವ ವಹಿಸಿ,ಕಳೆದ ಶೈಕ್ಷಣಿಕ ವರ್ಷದ ಕ್ರಿಕೆಟ್ ಪಂದ್ಯಾಟದಲ್ಲಿಯೂ ಅತ್ಯುತ್ತಮ ಆಟವನ್ನು ಪ್ರದರ್ಶಿಸಿ,ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದರು.

ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯನ್ನು ಒಳಗೊಂಡ ಜಿಲ್ಲೆಯ ನಾಯಕರಾಗಿ ಆಯ್ಕೆಯಾಗಿ, ನಾಳೆ ಬೆಂಗಳೂರಿನ ಆಲೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ಇವರು ಸಂತ ಫಿಲೋಮಿನಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲಿಯಾಸ್ ಪಿಂಟೋ ಹಾಗೂ ಸಂತ ಫಿಲೋಮಿನಾ ಪ್ರೌಢ ಶಾಲೆಯ ಶಿಕ್ಷಕಿ ಮೋಲಿ ಪಿಂಟೋ ರವರ ಪುತ್ರರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























