ವಿಟ್ಲ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಪಡಿಬಾಗಿಲು ಸಮೀಪ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ, ಬದಿಯಡ್ಕ ನಿವಾಸಿ ನಿಶಾಂತ್ ಸಣ್ಣ-ಪುಟ್ಟಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಕಾಸರಗೋಡು ಕಡೆ ತೆರಳುತ್ತಿದ್ದ ಕಾರು ಹಾಗೂ ವಿಟ್ಲ ಕಡೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.