ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಆರಂಭಿಸುವ ಬಗ್ಗೆ ವಿಕ್ರಮ್ ಮಂಗಳೂರು ಎಂಬವರು ಫೇಸ್ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಗೆ ಸಂಸದ ನಳಿನ್ ಕುಮಾರ್ ಅವರು ಸ್ಪಂದನೆ ನೀಡಿದ್ದು, ಶೀಘ್ರ ಈ ಬಗ್ಗೆ ಅಪ್ಡೇಟ್ ನೀಡುವುದಾಗಿ ತಿಳಿಸಿದ್ದಾರೆಂದು ತಿಳಿದು ಬಂದಿದೆ.
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಆರಂಭಿಸುವ ಬಗ್ಗೆ ವಿಕ್ರಮ್ ಮಂಗಳೂರು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.
ಈ ವಿಚಾರವಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಯಿಂದ ಪ್ರತಿಕ್ರಿಯೆಯಾಗಿ ಕರೆ ಬಂದಿದ್ದು, ಸಂಸದರು ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಸೋಮವಾರ ಈ ಬಗ್ಗೆ ಪ್ರೋಗ್ರೆಸ್ ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದು, ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಮತ್ತೆ ಪ್ರವಾಸಿ ಹಡಗು ತಕ್ಷಣದಲ್ಲೇ ಆರಂಭವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎಂದು ವಿಕ್ರಮ್ ಮಂಗಳೂರು ಅವರು ತಮ್ಮ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ..



























