ವಿಟ್ಲ : ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಕೆಲಿಂಜದಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ, ಬಾಳ್ತಿಲ ನಿವಾಸಿ ನಿಶ್ಚಯ್ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಲ್ಲಡ್ಕ ಕಡೆಯಿಂದ ವಿಟ್ಲಕ್ಕೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.


























