ಸುಳ್ಯ : ವಿಧಾನಸಭಾ ಕ್ಷೇತ್ರದ ಬಳ್ಪ ಗ್ರಾಮದಲ್ಲಿ ಜ.10 ರಂದು ಗ್ರಾಮೋತ್ಸವ-2024 ಕಾರ್ಯಕ್ರಮ ನಡೆಯಲಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಬಳ್ಪ ಗ್ರಾಮವನ್ನು ಪ್ರಧಾನಿ ನರೇಂದ್ರಮೋದಿಯವರ ಕನಸಿನ ‘ಸಂಸದರ ಆದರ್ಶ ಗ್ರಾಮ’ ಯೋಜನೆಯಡಿ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಅತಿಹೆಚ್ಚು ಅನುದಾನ ಬಳಕೆಯ ಸಂಸದರ ಆದರ್ಶ ಗ್ರಾಮ ಎಂಬ ಹೆಗ್ಗಳಿಕೆಗೆ ಬಳ್ಪ ಗ್ರಾಮ ಪಾತ್ರವಾಗಿದೆ.
ಬೆಳಿಗ್ಗೆ ಕೃಷಿ ಹಾಗೂ ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಅಡಿಕೆ ಹಾಗೂ ಇನ್ನಿತರ ಕೃಷಿಯಲ್ಲಿ ರೋಗನಿರೋಧಕ ಶಕ್ತಿ ಬಲವರ್ಧನೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1 ಗಂಟೆಯಿಂದ ಬಳ್ಪ ಕೇನ್ಯ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಬಳ್ಪ ಕೇನ್ಯ ಗ್ರಾಮದ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ಸಂಜೆ ಒಡಿಯೂರು ಶ್ರೀಗಳ ಉಪಸ್ಥಿತಿಯೊಂದಿಗೆ ಭಜನಾ ಸಂಕೀರ್ತನಾ ಮೆರವಣಿಗೆ ನಡೆಯಲಿದೆ.
ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವರು, ಸಂಸದರ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.




























