ಮಂಗಳೂರು : ಖ್ಯಾತ ನಟ ಪ್ರಭಾಸ್ ಅವರು ಶುಕ್ರವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲಕ, ಸಲಾರ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಪ್ರಭಾಸ್ರ ಜೊತೆಗಿದ್ದು, ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
ಸದ್ಯ ಸಲಾರ್ ತಂಡದ ಮಂಗಳೂರು ಭೇಟಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
























