ಚಿಕ್ಕಮಗಳೂರು : ಮಂಜು ಹಿನ್ನೆಲೆ ರಸ್ತೆ ಕಾಣದೇ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಸಾವಿರ ಅಡಿಯ ಹೆಚ್ಚು ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ಸೋಮನಕಾಡು ಸಮೀಪ ನಡೆದಿದೆ.
ಪ್ರಪಾತಕ್ಕೆ ಬಿದ್ದ ಹಿನ್ನಲೆ ಟಿಪ್ಪರ್ ಲಾರಿ ಸಂಪೂರ್ಣ ಜಖಂ ಆಗಿದೆ.
ಟಿಪ್ಪರ್ ಲಾರಿ ಪ್ರಪಾತಕ್ಕೆ ಬಿಳ್ತಾ ಇದ್ದಂತೆ ಚಾಲಕ ಅದರಿಂದ ಜಿಗಿದಿದ್ದಾನೆ. ಪರಿಣಾಮ ಚಾಲಕನಿಗೆ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆ ದಾಖಲಿಸಲಾಗಿದೆ.
ಮೂಡಿಗೆರೆಯಿಂದ ಮಂಗಳೂರಿಗೆ ಹೋಗ್ತಿದ್ದ ಖಾಲಿ ಟಿಪ್ಪರ್ ಲಾರಿ ಆಳವಾದ ಕಂದಕಕ್ಕೆ ಉರುಳಿದೆ.
ಬಣಕಲ್ ಪೊಲೀಸರು ಹಾಗೂ ಸ್ಥಳೀಯರು ಪ್ರಪಾತಕ್ಕೆ ಇಳಿದು ಲಾರಿ ಶೋಧ ನಡೆಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


























