ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ನಡೆದಿದೆ.
ಅಂಜಲಿ ಶೆಣೈ ಗಾಯಗೊಂಡ ಮಹಿಳೆ.

ರಸ್ತೆಯಲ್ಲಿ ಬರುತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಓಮಿನಿ ಕಾರಿನ ಬಳಿ ನಿಂತುಕೊಂಡಿದ್ದ ಮಹಿಳೆಗೆ ವೇಗವಾಗಿ ಬಂದು ಗುದ್ದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲೇ ಇದ್ದ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕಾರು ಚಾಲಕ ಬಂದು ಶರಣಾಗಿದ್ದಾನೆ. ಈ ಕೇಸ್ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























