ಪುತ್ತೂರು: ನರಿಮೊಗರು ಗ್ರಾ.ಪಂ ವ್ಯಾಪ್ತಿಯ ಶೆಟ್ಟಿಮಜಲು ಎಂಬಲ್ಲಿ ಒಂದೇ ಕುಟುಂಬದ 9 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಮನೆಯ ಎಲ್ಲಾ 9 ಮಂದಿಗೂ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮೇ.20ರಂದು ಸ್ಥಳಕ್ಕೆ ತೆರಳಿದ ಸಿಡಿಪಿಓ ಶ್ರೀಲತಾ ಮತ್ತು ಪೇಯಿಂಗ್ ಸ್ಕ್ವಾಡ್ ಅಧಿಕಾರಿ ಶಿಲ್ಪಾ ನೇತೃತ್ವದ ಕೊರೋನಾ ಕಾರ್ಯಪಡೆ ತಂಡ ಮನೆಯವರಿಗೆ ಸೂಕ್ತ ಮಾಹಿತಿ ನೀಡಿ ಮನೆಯನ್ನು ಸೀಲ್ಡೌನ್ ಮಾಡಿದ್ದಾರೆ.
ಒಂದೇ ಮನೆಯ 9 ಮಂದಿಗೆ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ ಅವರ ಮನೆಯನ್ನು ಸೀಲ್ಡೌನ್ ಮಾಡಲಾಗಿದ್ದು ಆ ಮನೆಗೆ ಗ್ರಾ.ಪಂನಿಂದ ಆಹಾರ ಪೂರೈಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳೀಯವಾಗಿ ಕೊರೋನಾ ಕುರಿತು ಜಾಗೃತಿ ಮೂಡಿಸಲಾಗಿದೆ. ಗ್ರಾ.ಪಂ ವ್ಯಾಪ್ತಿಯಲ್ಲಿ ಕೊರೋನಾ ಹರಡದಂತೆ ಕಾರ್ಯಪಡೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಸಿಡಿಪಿಓ ಶ್ರೀಲತಾ ತಿಳಿಸಿದ್ದಾರೆ.
ನರಿಮೊಗರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಕಾರ್ಯದರ್ಶಿ ಶೇಕ್ ಖಲಂದರ್, ಗ್ರಾ.ಪಂ ಉಪಾಧ್ಯಕ್ಷ ಸುಧಾಕರ ಕುಲಾಲ್ ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.