ಬೆಂಗಳೂರು : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಹೃದಯಾಘಾತವಾಗಿದ್ದು,ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ.
ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


























