ಪುತ್ತೂರು : ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷರಾದ ಶ್ರೀಪಾಲ್ ಜೈನ್ (74) ನಿಧನರಾದರು.

ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಶ್ರೀಪಾಲ್ ಜೈನ್ ಅವರು ಕೊಡುಗೈ ದಾನಿಯಾಗಿದ್ದು, ಸಾಮಾಜಿಕ-ಧಾರ್ಮಿಕ ಮುಂದಾಳು ಆಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

























