ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿದೆ.

500 ವರ್ಷಗಳ ಬಳಿಕ ಕೋಟ್ಯಾನುಕೋಟಿ ರಾಮಭಕ್ತರ ಬಯಕೆ ಕೊನೆಗೂ ಈಡೇರಿದೆ. ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಜೃಂಭಣೆಯಿಂದ ನೆರವೇರಿದೆ.
ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ಮೂರ್ತಿಯು ವಿರಾಜಮಾನವಾಗಿದ್ದು, ಪ್ರಾಣ ಪ್ರತಿಷ್ಠಾಪನೆಯ ಮೂಲಕ ಬಾಲರಾಮನ ಮೂರ್ತಿಯ ದರ್ಶನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಲಲ್ಲಾ ಮೂರ್ತಿಗೆ ಮೊದಲ ಪೂಜೆ ನೆರವೇರಿಸಿದ್ದಾರೆ.

























