ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ ವರ್ಷಾಚರಣೆಯ ಸಮಾರೋಪ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.



























